ಬೆಂಗಳೂರು :ರಾಜ್ಯದಲ್ಲಿ ವಿಧಾನಸಭೆಗೆ ಸದ್ಯವೇ ಚುನಾವಣೆ ಘೋಷಣೆ ಆಗುವ ಸಾಧ್ಯತೆ ಇದೆ. 11.30 ಕ್ಕೆ ದಿಢೀರ ಪತ್ರಿಕಾಗೋಷ್ಟಿ ಕರೆಯಲಾಗಿದೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
ಸರಕಾರ ಬಹುತೇಕ ತನ್ನ ಎಲ್ಲಾ ಅಧಿಕೃತ ಕಾರ್ಯಕ್ರಮಗಳನ್ನು ಪೂರ್ಣಗೊಳಿಸಿದೆ. ತುರ್ತಾಗಿ ಮಾಡಬೇಕಾಗಿರುವ ಸರಕಾರಿ ಆದೇಶಗಳಿಗೆ ಮಂಗಳವಾರ ಪೂರಕ ಪ್ರಕ್ರಿಯೆ ನಡೆಸಿದೆ. ಕಳೆದ ಸಲ ಮೇ 12 ರಂದು ಒಂದೇ ಹಂತದ ನಡೆದು ಮೇ 15 ಕ್ಕೆ ಮತ ಎಣಿಕೆ ನಡೆದಿತ್ತು. ಈ ಸಲವು ಅದೇ ಆಸುಪಾಸಿನ ಅವಧಿಯಲ್ಲಿ ಮತದಾನ ನಡೆಯಲಿರುವ ಕಾರಣ ಶೀಘ್ರವೇ ಚುನಾವಣಾ ದಿನಾಂಕ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಈ ನಡುವೆ ರಾಜ್ಯ ವಿಧಾನಸಭೆ ಚುನಾವಣೆ ಏಪ್ರಿಲ್ ಮೊದಲ ವಾರ ಪ್ರಕಟವಾಗುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ ಶುರುವಾಗಿದ್ದು, ಏಪ್ರಿಲ್ 5ರೊಳಗೆ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈಗಾಗಲೇ ರಾಜ್ಯದಲ್ಲಿ ಚುನಾವಣಾ ಸಿದ್ದತೆಯ ಪರಿಶೀಲನೆ ನಡೆಸಿದ ಕೇಂದ್ರ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಘೋಷಣೆಗೆ ಸಿದ್ಧತೆ ಮಾಡಿಕೊಂಡಿದೆ.
ಕೇಂದ್ರ ಮುಖ್ಯ ಚುನಾವಣಾ ಆಯುಕ್ತರು ರಾಜ್ಯಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ರಾಜ್ಯ ಚುನಾವಣಾ ಆಯೋಗ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತಗಳಿಗೆ ತಿಳಿಸಿದೆ.