ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್ಟಿಇ) ಅಡಿ
ಶೇ.25ರಷ್ಟು ಸೀಟುಗಳು ಉಚಿತ ಪ್ರವೇಶಕ್ಕೆ ಲಭ್ಯವಿರುವ ಶಾಲೆಗಳಲ್ಲಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕಾಲಾವಕಾಶವನ್ನು ಶಿಕ್ಷಣ ಇಲಾಖೆ ಸುಮಾರು ಒಂದು ತಿಂಗಳು ವಿಸ್ತರಿಸಿದೆ. ಆರ್ಟಿಇ ಸೀಟಿಗೆ ಅರ್ಜಿ ಸಲ್ಲಿಸಲು ಈ ಮೊದಲು ಏ.22ರವರೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಈ ಅವಧಿಯನ್ನು ಮೇ 20ರವರೆಗೆ ವಿಸ್ತರಿಸಲಾ ಗಿದೆ. ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಅರ್ಜಿ ಸಲ್ಲಿಕೆ ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆ ತಿಳಿಸಿದೆ.