ಬೆಳಗಾವಿ: ಗೋಕಾಕ ತಾಲೂಕಿನ ಘಟಪ್ರಭಾ ಉಪವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಯಬಾಗ ತಾಲೂಕಿನ ಬ್ಯಾಕೋಡ ಗ್ರಾಮದ ನಿವಾಸಿ ಶಿವಾನಂದ ನಾಯ್ಕವಾಡಿ (42) ಅವರು ಲಿವರ್ ಸಮಸ್ಯೆಯಿಂದಾಗಿ ಇಂದು ಬೆಳಗಿನ ಜಾವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಶಿವಾನಂದ ನಾಯ್ಕವಾಡಿ ಅವರು ಕಳೆದ ಎರಡು ದಿನಗಳಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ಅವರನ್ನು ಬಳ್ಳಾರಿ ಡಿಎಫ್ಒ ಆಗಿ ವರ್ಗಾಯಿಸಲಾಗಿತ್ತು. ಅವರ ಅಕಾಲಿಕ ನಿಧನದಿಂದಾಗಿ ಕುಟುಂಬಸ್ಥರು ಶೋಕಸಾಗರದಲ್ಲಿ ಮುಳುಗಿದ್ದಾರೆ.