ಬೆಳಗಾವಿ : ಬೆಳಗಾವಿ ಚನ್ನಮ್ಮ ವೃತ್ತಕ್ಕೆ ಹೊಸ ಲುಕ್ ಬರಲಿದೆ, ನಗರದ ಸಂಕಮ್ ಹೋಟೆಲ್ ನಿಂದ ಚನ್ನಮ್ಮ ವೃತ್ತದ ವರೆಗೆ ಸಂಚಾರ ವ್ಯವಸ್ಥೆ ಸುಗಮಗೊಳಿಸಲು ಮೇಲ್ಸೇತುವೆ ನಿರ್ಮಾಣ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿತ್ತು.
ಈ ಬಗ್ಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಹೇಳಿಕೆ ನೀಡಿ ಸಾಮಾಜಿಕ ಮಾಧ್ಯಮದಲ್ಲಿ ಎಐ ತಂತ್ರಜ್ಞಾನದ ವಿಡಿಯೋ ವೈರಲ್ ಆಗಿದೆ. ಆ ವಿಡಿಯೋವನ್ನು ನಾವು ಅಧಿಕೃತವಾಗಿ ರಿಲೀಸ್ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಜನಪ್ರಿಯ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ , ವಾಟ್ಸಾಪ್, ಇನ್ಸ್ಟಾಗ್ರಾಮ್ ಮುಂತಾದವುಗಳಲ್ಲಿ ಬೆಳಗಾವಿ ಚನ್ನಮ್ಮ ವೃತ್ತದ ಮೇಲ್ಸೇತುವೆ ಭಾರೀ ಟ್ರೆಂಡ್ ಪಡೆದುಕೊಂಡಿತ್ತು. ಮಾತ್ರವಲ್ಲ, ಚರ್ಚೆಗೆ ಗ್ರಾಸವಾಗಿತ್ತು. ಬೆಳಗಾವಿ ನಗರಕ್ಕೆ ಈ ಮೇಲ್ಸೇತುವೆ ಹೊಸ ಶೋಭೆ ತರಲಿದೆ ಎಂಬ ಮಾತುಗಳು ಹರಿದಾಡಿದ್ದವು. ಇದರ ಬೆನ್ನಲ್ಲೇ ಈಗ ಜಿಲ್ಲಾಧಿಕಾರಿಯವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.