ಬೆಳಗಾವಿ : ಬೆಳಗಾವಿಯಲ್ಲಿ ಮಂಗಳವಾರ ಮಧ್ಯರಾತ್ರಿ ಮಹಿಳೆಯ ಭೀಕರ ಕೊಲೆ ನಡೆದಿದೆ.
ಸದಾಶಿವನಗರದ ಲಕ್ಷ್ಮೀ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ. ಕೊಲೆಗೆ ಕಾರಣ ಇದುವರೆಗೂ ತಿಳಿದುಬಂದಿಲ್ಲ. ಮಹಿಳೆಯ ಕುತ್ತಿಗೆಗೆ ಚಾಕುವಿನಿಂದ ಬಲವಾಗಿ ಚುಚ್ಚಿ ಕೊಲೆ ಮಾಡಲಾಗಿದೆ. ಶವವನ್ನು ಪೊಲೀಸರು ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ. ಘಟನಾ ಸ್ಥಳದಲ್ಲಿ ಪೊಲೀಸರು ಬಿಗಿ ಪೊಲೀಸ್ ಕಾವಲು ನಿಯೋಜಿಸಿದ್ದು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ. ಬೆಳಗಾವಿ ಎಪಿಎಂಸಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳಗಾವಿಯಲ್ಲಿ ಮಧ್ಯರಾತ್ರಿ ನಡೆಯಿತು ಮಹಿಳೆಯ ಭೀಕರ ಕೊ*ಲೆ
