ಬೆಳಗಾವಿ : ಕ್ಷುಲ್ಲಕ ಕಾರಣಕ್ಕಾಗಿ ಪತಿ-ಪತ್ನಿ ನಡುವೆ ನಡೆದ ಜಗಳದಿಂದ ಮನನೊಂದು ತಾಲೂಕಿನ ಕೇದನೂರ ಗ್ರಾಮದ ರೈತನೊರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ.
ಕೇದನೂರ ಗ್ರಾಮದ ಬ್ರಾಹ್ಮಲಿಂಗ ಗಲ್ಲಿ ನಿವಾಸಿ ಸುರೇಶ ಶಂಕರ ವರ್ಗೆ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ.ನಿನ್ನೆ ರಾತ್ರಿ ಪತಿ ಪತ್ನಿ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳವಾಗಿದೆ. ಆ ಸಿಟ್ಟಿನಲ್ಲಿ ಪತ್ನಿ ಇತನನ್ನು ಬಿಟ್ಟು ತವರು ಮನೆಗೆ ಹೋಗಿದ್ದಾಳೆ. ಇದರಿಂದ ಮನನೊಂದು ಈತ ಬಹುಶಃ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಹೇಳಲಾಗುತ್ತಿದೆ. ಮೃತರಿಗೆ ತಂದೆ, ತಾಯಿ, ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗ ಇದ್ದಾರೆ.