⏩ ಹೆಬ್ಬಾಳ್ಕರ್ ಗೆ ಆದ ಅನ್ಯಾಯದ ವಿರುದ್ಧ ವಿಶೇಷ ವರದಿ ತಯಾರಿಸಿತ್ತು ಜನಜೀವಾಳ
⏩ ಕೊನೆಗೂ ಸಂಘಟನಾ ಚತುರೆಗೆ ಜವಾಬ್ದಾರಿ ವಹಿಸಿ ಪಟ್ಟಿ ಪರಿಷ್ಕರಿಸಿ ಪ್ರಕಟಿಸಿದ ಕೈ ಪಕ್ಷ
ಬೆಳಗಾವಿ /ದೆಹಲಿ : ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದ 28 ಮತಕ್ಷೇತ್ರದ ಪಟ್ಟಿಯನ್ನು ಕೊನೆಗೂ ಕಾಂಗ್ರೆಸ್ ಹೈಕಮಾಂಡ್ ಹೊಸದಾಗಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ರಾಜ್ಯದ ಪ್ರಭಾವಿ ಸಚಿವೆ, ಶ್ರೇಷ್ಠ ಸಂಘಟಕಿ ಹಾಗೂ ಸಂಘಟನಾ ಚತುರೆ ಎಂದೇ ಖ್ಯಾತಿ ಪಡೆದಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಯಾವುದೇ ಕ್ಷೇತ್ರಕ್ಕೆ ಉಸ್ತುವಾರಿ ನೀಡದೆ ಇದ್ದ ಕಾರಣಕ್ಕೆ ಸ್ವತಃ ಕಾಂಗ್ರೆಸ್ ವಲಯದಲ್ಲಿ ಅಪಸ್ವರ ಕೇಳಿಬಂದಿತ್ತು. ಇದೀಗ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಹೊಸ ಪಟ್ಟಿಯ ಪ್ರಕಾರ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಉಸ್ತುವಾರಿಯನ್ನು ವಹಿಸಲಾಗಿದೆ.
ಚಿಕ್ಕೋಡಿ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಎಚ್.ಕೆ.ಪಾಟೀಲ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. ಹಾವೇರಿ ಉಸ್ತುವಾರಿಯಾಗಿ ನೇಮಕಗೊಂಡಿದ್ದ ಶಿವಾನಂದ ಪಾಟೀಲ ಅವರನ್ನು ಆ ಕ್ಷೇತ್ರದಿಂದ ತೆರವುಗೊಳಿಸಲಾಗಿದೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಹೊಸ ಬದಲಾವಣೆ ಮಾಡಲಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಈ ಹೊಸ ಪಟ್ಟಿಗೆ ಒಪ್ಪಿಗೆ ನೀಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.