ಬೆಳಗಾವಿ : ಜಿಲ್ಲಾ ಮಟ್ಟದ ಯುವಜನೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗಾಗಿ 5 ಕಿ.ಮೀ ಮ್ಯಾರಥಾನ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
13 ರಂದು ಬೆಳಿಗ್ಗೆ 7 ಗಂಟೆಗೆ ನಗರದ ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾಗುವ ಮ್ಯಾರಾಥಾನ್ ಕೊಲ್ಲಾಪುರ ವೃತ್ತದ ಮಾರ್ಗವಾಗಿ ಚನ್ನಮ್ಮ ವೃತ್ತ ತಲುಪಿ, ಮರಳಿ ಅದೇ ಮಾರ್ಗವಾಗಿ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ.
ಹೆಚ್.ಐ.ವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಹೆಚ್.ಐ.ವಿ ಮತ್ತು ಏಡ್ಸ್ (ತಡೆ) ಕಾಯ್ದೆ, ನ್ಯಾಕೋ ಏಡ್ಸ್ ಆ್ಯಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್ಟಿಐ, ಇತ್ಯಾದಿ ಬಗ್ಗೆ ಕಾಲೇಜು ವಿದ್ಯಾರ್ಥಿ/ವಿದ್ಯಾರ್ಥಿನಿಯರಲ್ಲಿ ಅರಿವು ಮೂಡಿಸಲು ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಏಡ್ಸ್ ನಿರೋಧಕ ಮತ್ತು ನಿಯಂತ್ರಣ ಘಟಕ, ಬೆಳಗಾವಿಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.