ಬೆಂಗಳೂರು :
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಬೇಕೆಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ನಗರಾಭಿವೃದ್ಧಿ ಖಾತೆ ಸಚಿವರಿಗೆ ಪತ್ರ ಬರೆದಿದ್ದಾರೆ.
ಧಾರವಾಡದ ಮಹಾಜನತೆ, ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಹಾಗೂ ಹಿರಿಯರು, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆ ರಚನೆ ಮಾಡಬೇಕೆಂದು ಒತ್ತಾಯಿಸಿರುವ ಹಿನ್ನೆಲೆಯಲ್ಲಿ ಸರಕಾರ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅವರು ವಿನಂತಿಸಿದ್ದಾರೆ.
ಆದ್ದರಿಂದ ಸದರಿ ಮನವಿ ಪತ್ರ ಹಾಗೂ ಸಂಬಂಧಿಸಿದ ಅಗತ್ಯ ದಾಖಲೆಗಳನ್ನು ಪರಿಶೀಲಿಸಿ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕವಾಗಿ ಧಾರವಾಡ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡಲು ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅವರು ಕೋರಿದ್ದಾರೆ.