ಬೆಳಗಾವಿ :
ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಮತ್ತೆ ಖಾತೆ ತೆರೆಯುವುದು ಬಹುತೇಕ ಖಚಿತವಾಗಿದೆ. ಕಳೆದ ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ್ದ ಸತೀಶ್ ಜಾರಕಿಹೊಳಿ ಅವರು ಇದೀಗ ನೆರೆಯ ಚಿಕ್ಕೋಡಿಯಲ್ಲಿ ತಮ್ಮ ಸುಪುತ್ರಿಯನ್ನು ಕಣಕ್ಕಿಳಿಸುವ ಮೂಲಕ ಕಾಂಗ್ರೆಸಿಗೆ ಮತ್ತೆ ಬಲ ತಂದುಕೊಡಲು ಮುಂದಾಗಿದ್ದರು ಅವರ ಪರಿಶ್ರಮ ಕೊನೆಗೂ ಫಲ ಕೊಟ್ಟಂತಿದೆ. ಸದ್ಯದ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಸತೀಶ್ ಜಾರಕಿಹೊಳಿ ಸುಪುತ್ರಿ ಇದೀಗ ಗೆಲುವಿಗೆ ತೀರಾ ಹತ್ತಿರವಾಗಿದ್ದಾರೆ.
ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್ ಪಕ್ಷ ಜಯಗಳಿಸುವ ಹಾದಿಯಲ್ಲಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜ್ಯದ ಪ್ರಭಾವಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಅಣ್ಣಾ ಸಾಹೇಬ್ ಜೊಲ್ಲೆ ವಿರುದ್ಧ 80,000ಕ್ಕೂ ಅಧಿಕ ಮತಗಳನ್ನು ಪಡೆಯುವ ಮೂಲಕ ಗೆಲುವಿನತ್ತ ಸಾಗಿದ್ದಾರೆ.
ಇನ್ನು ಕೆಲವೇ ಸುತ್ತುಗಳು ಉಳಿದಿದ್ದು ಪ್ರಿಯಾಂಕಾ ಜಾರಕಿಹೊಳಿ ಅವರು ಇದೇ ಮೊದಲ ಬಾರಿಗೆ ಸಂಸತ್ ಪ್ರವೇಶಿಸುವುದು ಬಹುತೇಕ ಖಚಿತವಾಗಿದೆ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವ ಆಚರಿಸುತ್ತಿದ್ದು ಒಟ್ಟಾರೆ ಗಮನ ಸೆಳೆದಿದೆ.