ಬೆಂಗಳೂರು :
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಕೊಟ್ಟಿಲ್ಲ. ರಾಜೀನಾಮೆ ನೀಡಿದ್ದೇನೆ ಎಂಬುದು ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಳ್ಳಾರಿಯಲ್ಲಿ ವಿ. ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆ ವ್ಯಕ್ತಪಡಿಸಿದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. 4 ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ ಎಂದು ತಿಳಿಸಿದ್ದಾಗಿ ಹೇಳಿದ್ದೆ ಎಂದಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ ಎಂದು ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಸುದ್ದಿ ಬಿತ್ತರಿಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ವಿವರಿಸಿದ್ದಾರೆ ಎಂದು ಬಿಜೆಪಿ ಕರ್ನಾಟಕದ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.