ಬೆಂಗಳೂರು : ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ಇಂದು ತನ್ನ ತಾರಾ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಆದರೆ, ಇದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿರುವ ಏಕೈಕ ಸಚಿವೆ ಹೆಸರು ನಾಪತ್ತೆಯಾಗಿದೆ.
ಇದು ಹಲವಾರು ಊಹಾಪೋಹಗಳನ್ನು ಹುಟ್ಟುಹಾಕಿದೆ.40 ಜನರ ಹೆಸರು ಪ್ರಕಟಿಸಲಾಗಿದೆ. ಅದರಲ್ಲಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಘಟಕದ ರಾಜ್ಯಾಧ್ಯಕ್ಷೆ ಪುಷ್ಪಾ ಅಮರನಾಥ ಅವರ ಹೆಸರು ತಾರಾ ಪ್ರಚಾರಕರ ಪಟ್ಟಿಯಲ್ಲಿ ಸೇರಿವೆ. ಆದರೆ, ರಾಜ್ಯದ ಪ್ರಭಾವಿ ಸಚಿವೆ ಆಗಿರುವ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ನಾಪತ್ತೆಯಾಗಿರುವುದು ಹುಬ್ಬೇರಿಸುವಂತೆ ಮಾಡಿದೆ.