ಬೆಳಗಾವಿ: ಶನಿವಾರ ಬೆಳಗಾವಿಯಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ಹಲವರಿಗೆ ಚಾಕು ಇರಿಲಾಗಿತ್ತು. ಈ ಘಟನೆಗೆ ಸಂಬಂಧಿಸಿ ಪೊಲೀಸರು ಕೊನೆಗೂ ಚಾಕು ಇರಿದವನನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಗಾಂಜಾ ಸೇವಿಸಿ ಈ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ಸದ್ಯ ಪ್ರಾಥಮಿಕವಾಗಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಎಲ್ಲಾ ವಿಧದಲ್ಲೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಮೆರವಣಿಗೆ ಸಂದರ್ಭದಲ್ಲಿ ರಾಜ್ಯೋತ್ಸವದಲ್ಲಿ ಪಾಲ್ಗೊಂಡ ಹಲವರಿಗೆ ಚಾಕು ಇರಿದಿದ್ದರು.
ಚಾಕು ಇಟ್ಟುಕೊಂಡು ಬಂದವ ಕೊನೆಗೂ ಪೊಲೀಸ್ ವಶಕ್ಕೆ


