ಬೆಳಗಾವಿ: ಘಟಪ್ರಭಾ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ರಾತ್ರಿ ರೋಗಿಯೊಬ್ಬ ತನ್ನ ವ್ಯವಸ್ಥೆಗೆ ನಿಂತಿದ್ದ ಅಟೆಂಡರ್ ನನ್ನೇ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯಿಂದ ಇತರ ರೋಗಿಗಳು ಬೆಚ್ಚಿ ಬಿದ್ದಿದ್ದಾರೆ. ಘಟನೆಯ ಚಿತ್ರಣ ಸಿಸಿಟಿವಿಯಲ್ಲಿ ದಾಖಲಾಗಿದೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಮಹಾರಾಷ್ಟ್ರದ ಬೀಡ್ ಜಿಲ್ಲೆಯ ವ್ಯಕ್ತಿ ಕೊಲೆಯಾಗಿದ್ದು ಕೊಲೆಗೆ ಕಾರಣ ಏನು ಎಂಬ ಬಗ್ಗೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.