ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮಮಂದಿರದ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ ದೀಕ್ಷಿತ್ ಶನಿವಾರ ಬೆಳಗ್ಗೆ ನಿಧನರಾಗಿದ್ದಾರೆ.
86 ವರ್ಷದ ಲಕ್ಷ್ಮೀಕಾಂತ ದೀಕ್ಷಿತ್ ಅವರು ಕಳೆದ ಕೆಲವು ದಿನಗಳಿಂದ ಚೆನ್ನಾಗಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಮಣಿಕರ್ಣಿಕಾ ಘಾಟ್ನಲ್ಲಿ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಪ್ರಧಾನಿ ಮೋದಿ ನೇತೃತ್ವದಲ್ಲಿ ಜನವರಿ 22 ರಂದು ಅಯೋಧ್ಯೆ ದೇವಸ್ಥಾನದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲಾಯಿತು.
ವಾರಾಣಾಸಿಯ ಹಿರಿಯ ವಿದ್ವಾಂಸರಲ್ಲಿ ಒಬ್ಬರಾಗಿದ್ದ ದೀಕ್ಷಿತ್ ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯವರಾಗಿದ್ದರು. ಆದರೆ ಅವರ ಕುಟುಂಬವು ವಾರಾಣಸಿಯಲ್ಲಿ ಹಲವಾರು ತಲೆಮಾರುಗಳಿಂದ ವಾಸಿಸುತ್ತಿದೆ.
ದೀಕ್ಷಿತ್ ನಿಧನಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಅರ್ಚಕ ನಿಧನ
