ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. ಅಪ್ರತಿಮ ಹಾಗೂ ಅತ್ಯಂತ ಕ್ರಿಯಾಶೀಲ ಅಧಿಕಾರಿ ಎಂದೇ ಶೆಟ್ಟೆಣ್ಣವರ ಇದುವರೆಗೆ ತಮ್ಮ ಸೇವಾ ಕಾರ್ಯದಿಂದ ಜನಮನದಲ್ಲಿ ಗುರುತಿಸಿಕೊಂಡಿದ್ದಾರೆ. ಇದೀಗ ಇವರನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡುವ ಮೂಲಕ ರಾಜ್ಯ ಸರಕಾರ ಅಷ್ಟು ಜಿಲ್ಲೆಗಳ ಜೊತೆಗೆ ಅತ್ಯಂತ ಸಮನ್ವಯವಾಗಿ ಕೆಲಸ ಮಾಡುವ ಹೊಣೆಗಾರಿಕೆಯನ್ನು ಶೆಟ್ಟೆಣ್ಣವರ ಅವರಿಗೆ ನೀಡಿದೆ.
ಬೆಂಗಳೂರು :ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಸಂಜಯ ಬಿ. ಶೆಟ್ಟೆಣ್ಣವರ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.ಸಂಜಯ ಶೆಟ್ಟೆಣ್ಣವರ ಅವರು ಸದ್ಯ ಬೆಂಗಳೂರಿನ ಹಟ್ಟಿ ಗೋಲ್ಡ್ ಮೈನ್ಸ್ ಕಂಪನಿ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಳಗಾವಿಯರಾದ ಸಂಜಯ ಶೆಟ್ಟೆಣ್ಣವರ ಈ ಮೊದಲು ವಿಜಯಪುರ ಹಾಗೂ ಹಾವೇರಿ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಬೆಳಗಾವಿ ಕಾಡಾದಲ್ಲಿಯೂ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.ಶುಕ್ರವಾರವೇ ಅವರು ಬೆಳಗಾವಿ ಪ್ರಾದೇಶಿಕ ಆಯುಕ್ತರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಾಗಲಕೋಟೆ, ಉತ್ತರ ಕನ್ನಡ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ.