ಬೆಂಗಳೂರು: ಹಾಸನ ಲೋಕಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಕ ಮಾಡಿದೆ.
ಹಾಸನದ ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಾದಿಸಲು ವಿಶೇಷ ಅಭಿಯೋಜಕರನ್ನಾಗಿ ಎನ್.ಜಗದೀಶ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಮಂಗಳವಾರ (ಏಪ್ರಿಲ್ 30) ಆದೇಶ ಹೊರಡಿಸಿದೆ. ಜಗದೀಶ ಅವರು ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ.
ಪ್ರಜ್ವಲ್ ರೇವಣ್ಣ ಹಾಗೂ ಹೆಚ್.ಡಿ.ರೇವಣ್ಣ ವಿರುದ್ಧವೂ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ 354 A, 354 D, 509 ಅಡಿ ಪ್ರಕರಣ ದಾಖಲು ಮಾಡಿದ್ದಾರೆ. ಎಫ್ಐಆರ್ನಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಆರೋಪಿ ನಂಬರ್1 ಮತ್ತು ಪ್ರಜ್ವಲ್ ರೇವಣ್ಣ ಎ2 ಆರೋಪಿಯಾಗಿದ್ದಾರೆ.