ಶ್ರೀನಗರ : ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ನರೆನ್ಸ್ ನಾಯಕ ಒಮರ್ ಅಬ್ದುಲ್ಲಾ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಅಕ್ಟೋಬರ್ 16 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸೋಮವಾರ ಒಮರ್ ಅಬ್ದುಲ್ಲಾ ಅವರಿಗೆ ಆಹ್ವಾನಿಸಿದ್ದಾರೆ.
ಅಬ್ದುಲ್ಲಾ ಅವರಿಗೆ ಬರೆದ ಪತ್ರದಲ್ಲಿ, ಸಿನ್ಹಾ ಅವರು, ‘ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಸರೆನ್ಸ್ ಅಧ್ಯಕ್ಷ ಡಾ. ಫಾರೂಕ್ ಅಬ್ದುಲ್ಲಾ ಅವರಿಂದ 2024 ರ ಅಕ್ಟೋಬರ್ 11 ರಂದು ಸರ್ಕಾರ ರಚನೆ ಸಂಬಂಧ ಪತ್ರವನ್ನು ಸ್ವೀಕರಿಸಿದ್ದೇನೆ. ಅದರಲ್ಲಿ ನಿಮ್ಮನ್ನು ಶಾಸಕಾಂಗದ ನಾಯಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ’ ಎಂದು ಹೇಳಿದ್ದಾರೆ.