ಬೆಂಗಳೂರು :
ಮಂಡ್ಯ ಪಕ್ಷೇತರ ಸಂಸದೆ ಸುಮಲತಾ ಅವರು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ಕುತೂಹಲ ಹಲವು ದಿನಗಳಿಂದ ಮನೆ ಮಾಡಿದೆ. ಕೊನೆಗೂ ಇದಕ್ಕೆ ಉತ್ತರ ದೊರೆಯುತ್ತದಾ ?
ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಗೆ ಮಾ. 11 ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ . ಈ ಸಂದರ್ಭದಲ್ಲಿ ಮಂಡ್ಯದಲ್ಲಿ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ವೇಳೆ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನುವ ಮಾತುಗಳು ಕ್ಷೇತ್ರದಲ್ಲಿ ಕೇಳಿಬರುತ್ತಿವೆ . ಮೋದಿ ಸಮ್ಮುಖದಲ್ಲೇ ಬಿಜೆಪಿ ಸೇರಬೇಕು ಎನ್ನುವುದು ಸುಮಲತಾ ಅವರ ಆಸೆಯಾಗಿದೆ . ಅದರಂತೆ ಮಾ . 11 ರಂದು ನರೇಂದ್ರ ಮೋದಿ ನೇತೃತ್ವದಲ್ಲಿ ಕೇಸರಿ ಪಾಳಯ ಸೇರಿಕೊಳ್ಳಬಹುದು ಎಂದು ವರದಿಯಾಗಿದೆ. ಒಟ್ಟಾರೆ, ಮುಂದಿನ ಬೆಳವಣಿಗೆಗಳ ಬಗ್ಗೆ ಕಾದು ನೋಡಬೇಕಿದೆ.