ರಾಯಚೂರು : ಜೆಸಿಬಿಯೊಂದು ಹರಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ನೀಲವಂಜಿ ಗ್ರಾಮದಲ್ಲಿ ಇಂದು(ಬುಧವಾರ) ಬೆಳಗ್ಗೆ ನಡೆದಿದೆ ಎಂದು ವರದಿಯಾಗಿದೆ.
ಮೃತರನ್ನು ಛತ್ತೀಸ್ಗಢ ಮೂಲದ ಕೃಷ್ಣಾ (25) ಶಿವುರಾಮ (30) ಹಾಗೂ ಬಲರಾಮ (28) ಎಂದು ಗುರುತಿಸಲಾಗಿದೆ. ಅವರು ಬೋರ್ವೆಲ್ ಕೆಲಸ ಮುಗಿಸಿಕೊಂಡು ರಾತ್ರಿ ಜಮೀನಿನಲ್ಲೇ ಮಲಗಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಹೇಳಲಾಗಿದೆ. ಗಾಢ ನಿದ್ರೆಯಲ್ಲಿದ್ದ ಮೂವರ ಮೇಲೆ ಜೆಸಿಬಿ ಹರಿದ ಪರಿಣಾಮ ಮೂವರು ಸಾವಿಗೀಡಾಗಿದ್ದಾರೆ. ಜೆಸಿಬಿಯನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿದ್ರೆಯಲ್ಲಿದ್ದವರ ಮೇಲೆ ಹರಿದ ಜೆಸಿಬಿ, ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವು
