ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಅವಧಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ನಡುವೆ ಮೇಲ್ಮೈ ಸುಳಿಗಾಳಿ ಮುಂದುವರೆದಿದ್ದರಿಂದ ಇದರಿಂದ ಕರ್ನಾಟಕವೂ ಸೇರಿದಂತೆ ದಕ್ಷಿಣ ಭಾರತದ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಅಲ್ಲದೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಶಿವಮೊಗ್ಗ, ಮಂಡ್ಯ ಸೇರಿದಂತೆ ವಿವಿಧ ಭಾಗಗಳಲ್ಲಿ ಮಳೆ ಆಗಲಿದೆ.
ಉತ್ತರ ಒಳನಾಡಿನ ಬಳ್ಳಾರಿ, ವಿಜಯನಗರ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿ ಮಳೆ ಆಗಲಿದೆ. ಈ ಭಾಗಗಳಲ್ಲಿ ಮಿಂಚು – ಗುಡುಗು ಸಹಿತ ಮಳೆ ಆಗಲಿದೆ.
ಗಾಳಿಯ ವೇಗವು 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


