ದೆಹಲಿ:
ಸಂಸತ್ತಿನ ವಿಶೇಷ ಅಧಿವೇಶನದ ಕಲಾಪಗಳು ಇಂದಿನಿಂದ ಹೊಸ ಸಂಸತ್ ಕಟ್ಟಡದಲ್ಲಿ ನಡೆಯಲಿವೆ.
ನಿನ್ನೆಯಿಂದ ಸಂಸತ್ತಿನ ವಿಶೇಷ ಅಧಿವೇಶನ ಆರಂಭವಾಗಿದೆ. ಒಟ್ಟು 5 ದಿನಗಳ ವಿಶೇಷ ಅಧಿವೇಶನ ನಡೆಯಲಿದ್ದು ಹಲವು ಮಸೂದೆಗಳು ಮಂಡನೆಯಾಗಲಿವೆ.
ಭಾರತದ 75 ವರ್ಷಗಳ ಪ್ರಜಾಪ್ರಭುತ್ವದ ಪಯಣದ ಬಗ್ಗೆ ನಿನ್ನೆ ಚರ್ಚೆಗಳು ನಡೆದವು. ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವರು ಮಾತನಾಡಿದರು.
ಇಂದು ಮಧ್ಯಾಹ್ನ 1.15ಕ್ಕೆ ಲೋಕಸಭೆಯ ಕಲಾಪ ಆರಂಭವಾಗಲಿದೆ. ರಾಜ್ಯಸಭೆ ಕಲಾಪ ಮಧ್ಯಾಹ್ನ 2.15ಕ್ಕೆ ಶುರುವಾಗಲಿದೆ.