ದೆಹಲಿ :
ಭಾರತ 1983ರ ಐಸಿಸಿ ಏಕದಿನ ವಿಶ್ವಕಪ್ ಗೆದ್ದು ಜೂನ್ 25ಕ್ಕೆ 40 ವರ್ಷ ತುಂಬಿದೆ.
ವೆಸ್ಟ್ ಇಂಡೀಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ 43 ರನ್ ಗಳ ಜಯ ಸಾಧಿಸಿ ಇತಿಹಾಸ ಸೃಷ್ಟಿಸಿತ್ತು. ಕಪಿಲ್ ದೇವ್ ನಾಯಕತ್ವದಲ್ಲಿ ಭಾರತ ಚೊಚ್ಚಲ ವಿಶ್ವಕಪ್ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. 28 ವರ್ಷಗಳ ಬಳಿಕ ಅಂದರೆ 2011ರಲ್ಲಿ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ ತವರಿನಲ್ಲಿ ನಡೆದಿದ್ದ ವಿಶ್ವಕಪ್ ಟೂರ್ನಿಯಲ್ಲಿ ನಂತರ ಭಾರತ ಪ್ರಶಸ್ತಿ ಎತ್ತಿ ಹಿಡಿದಿತ್ತು.