ಬೆಳಗಾವಿ: 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ರೋಹನ್ ಜಗದೀಶ್ ಅವರು ಗದಗ ಜಿಲ್ಲೆಯ ಎಸ್ಪಿ ಆಗಿ ನೇಮಕಗೊಂಡಿದ್ದಾರೆ. ರಾಜ್ಯ ಸರಕಾರ ಸುಮಾರು ಎರಡು ವರ್ಷಗಳ ಹಿಂದೆ ಅವರನ್ನು ಬೆಳಗಾವಿ ಪೊಲೀಸ್ ಕಮಿಷನರ್ ವ್ಯಾಪ್ತಿಯ ಕಾನೂನು ಸುವಸ್ಥೆಯ ಡಿಸಿಪಿಯಾಗಿ ನೇಮಕ ಮಾಡಿತ್ತು.
ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ಡಿಐಜಿ ಎಂ.ಎನ್. ಅನುಚೇತ್, ದಕ್ಷಿಣ ಕನ್ನಡದ ಕಾನೂನು ಸುವ್ಯವಸ್ಥೆ ಡಿಸಿಪಿ ಜಿತೇಂದ್ರ ಕುಮಾರ್ ಸೇರಿದಂತೆ 34 ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ.