ಪ್ರಾದೇಶಿಕ ಆಯುಕ್ತರಾಗಿದ್ದ ಎಂ.ಜಿ. ಹಿರೇಮಠ ಬೆಳಗಾವಿ ಜಿಲ್ಲೆಯವರು. ಚುನಾವಣೆ ಸಂದರ್ಭದಲ್ಲಿ ಸ್ವಂತ ಜಿಲ್ಲೆಯಿಂದ ಬೇರೆಡೆ ವರ್ಗಾವಣೆ ಮಾಡಲಾಗುತ್ತದೆ. ಈ ಕಾರಣಕ್ಕೆ ಇದೀಗ ವರ್ಗಾವಣೆಗೊಂಡಿದ್ದಾರೆ. ನೂತನ ಪ್ರಾದೇಶಿಕ ಆಯುಕ್ತರಾಗಿ ನೇಮಕಗೊಂಡಿರುವ ಬಗಾದಿ ಗೌತಮ್ ಈ ಮೊದಲು ಕೆಲ ವರ್ಷಗಳ ಹಿಂದೆ ಬೆಳಗಾವಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಕಾರ್ಯನಿರ್ವಹಿಸಿದ್ದರು.
ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ.
ಈ ಕುರಿತು ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರ, ಮೈನಿಂಗ್ ಮತ್ತು ಜಿಯಾಲಜಿ ಇಲಾಖೆಯ ಡೈರೆಕ್ಟರ್ ಆಗಿದ್ದ ಐಎಎಸ್ ಅಧಿಕಾರಿ ಡಾ.ಬಗಾದಿ ಗೌತಮ್ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಕಮೀಷನರ್ ಆಗಿ ನೇಮಕ ಆದೇಶಿಸಲಾಗಿದೆ.
ಬೆಳಗಾವಿ ಪ್ರಾದೇಶಿಕ ಕಮೀಷನರ್ ಆಗಿದ್ದ ಎಂ.ಜಿ. ಹಿರೇಮಠ ಅವರನ್ನು ಕರ್ನಾಟಕ ರೂರಲ್ ಇನ್ಫಾಸ್ಟ್ರಕ್ಚರ್ ಡೆವಲ್ಪಮೆಂಟ್ ಕಾರ್ಪೊರೇಷನ್ ಎಂ.ಡಿ ಆಗಿ ನಿಯೋಜಿಸಲಾಗಿದೆ. ಸಂಜೀವಿನಿ-ಕೆಎಸ್ ಆರ್ಎಲ್ ಪಿಎಸ್ ಹೆಚ್ಚುವರಿ ಮಿಷನ್ ಡೈರೆಕ್ಟರ್ ಆಗಿದ್ದ ಸ್ವರೂಪ ಟಿ.ಕೆ ಅವರನ್ನು ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿ ನೇಮಿಸಲಾಗಿದೆ. ಧಾರವಾಡ ಜಿಲ್ಲಾ ಪಂಚಾಯತ ಸಿಇಒ ಆಗಿದ್ದ ಸುರೇಶ್ ಬಿ ಹಿಟ್ನಾಳ ಅವರನ್ನು ದಾವಣಗೆರೆ ಜಿಲ್ಲಾ ಪಂಚಾಯತ ಸಿಇಒ ಆಗಿ ನೇಮಕ ಮಾಡಲಾಗಿದೆ.