ಬೆಳಗಾವಿ :
ಬೆಳಗಾವಿ ಉಪವಿಭಾಗಾಧಿಕಾರಿಯಾಗಿದ್ದ ರವೀಂದ್ರ ಕರಲಿಂಗಣ್ಣವರ ಅವರನ್ನು ದಿಢೀರ್ ಬದಲಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕಿರಿಯ ಶ್ರೇಣಿ ಕೆ ಎ ಎಸ್ ಅಧಿಕಾರಿ ಬಲರಾಮ ಚವ್ಹಾಣ್ ಅವರನ್ನು ರಾಜ್ಯ ಸರ್ಕಾರ ವರ್ಗಾಯಿಸಿದೆ.
ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಬೆಳಗಾವಿ ಉಪವಿಭಾಗಾಧಿಕಾರಿಯಾಗಿ ಬಲರಾಮ್ ಚವ್ಹಾಣ್ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಶಾಂತರಾಜು ಆದೇಶ ಹೊರಡಿಸಿದ್ದಾರೆ. ಕರಲಿಂಗಣ್ಣವರ್ ಅವರಿಗೆ ಯಾವುದೇ ಸ್ಥಾನತೋರಿಸಿಲ್ಲ.