ಬೆಳಗಾವಿ : ನಿನ್ನೆ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಭೆಯನ್ನು ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಮೈದಾನದಲ್ಲಿ ಇಂದು (ಶುಕ್ರವಾರ) ಬೆಳಗ್ಗೆ 10.30 ಕ್ಕೆ ಏರ್ಪಡಿಸಲಾಗಿದೆ.
ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶ ರದ್ದು ಮಾಡಲಾಗಿದ್ದು, ಅದೇ ಸ್ಥಳದಲ್ಲಿ ಈ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಮಾವೇಶಕ್ಕೆ ಆಗಮಿಸಿದ್ದ ಸಚಿವರು, ಶಾಸಕರು, ನಾಯಕರು, ಪದಾಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.