ದೆಹಲಿ :
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಮೂವರು ಕಣದಲ್ಲಿದ್ದಾರೆ. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ, ತಿರುವನಂತಪುರ ಸಂಸದ ಶಶಿ ತರೂರ್ ಹಾಗೂ ಜಾರ್ಖಂಡ್ ಮಾಜಿ ಸಚಿವ ಕೆ. ಎನ್. ತ್ರಿಪಾಠಿ ಕಣದಲ್ಲಿರುವವರು.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬೆಂಬಲ ಪಡೆದಿರುವ ಮಲ್ಲಿಕಾರ್ಜುನ ಖರ್ಗೆ ಗೆಲ್ಲುವ ಅಭ್ಯರ್ಥಿ ಎಂದೇ ಪರಿಗಣಿಸಲಾಗಿದೆ. ಖರ್ಗೆ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಘಟಾನುಘಟಿ ನಾಯಕರ ದಂಡು ಎಐಸಿಸಿ ಕಚೇರಿಯಲ್ಲಿ ನೆರೆದಿತ್ತು.
ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನವಾಗಿದ್ದು ಕಾಂಗ್ರೆಸ್ಸಿನ 9,100 ಕ್ಕೂ ಅಧಿಕ ಸದಸ್ಯರು ಮತದಾನ ಮಾಡಲು ಅರ್ಹರು. ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು ಅಕ್ಟೋಬರ್ 19 ಕ್ಕೆ ಫಲಿತಾಂಶ ಹೊರಬೀಳಲಿದೆ.