ಬೆಂಗಳೂರು :
ಈ ಬಾರಿಯ ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯ 22 ಹಾಲಿ ಶಾಸಕರಿಗೆ ಟಿಕೆಟ್ ಸಿಗುವುದು ಬಹುತೇಕ ಅನುಮಾನ ಎಂದು ಉನ್ನತ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ .
ಐದಕ್ಕೂ ಹೆಚ್ಚು ಹಿರಿಯ ನಾಯಕರಿಗೆ ಕ್ಷೇತ್ರವನ್ನು ಬಿಟ್ಟುಕೊಡುವಂತೆ ದೂರವಾಣಿ ಕರೆ ಮೂಲಕ ಸೂಚನೆ ನೀಡಿದೆ ಎನ್ನಲಾಗುತ್ತಿದೆ. ತನಗೆ ದೂರವಾಣಿ ಕರೆ ಬಂದಿದ್ದು ನಿಜ , ಹೊಸಬರಿಗೆ ಅವಕಾಶ ನೀಡುವಂತೆ ಕೋರಿದ್ದಾರೆ ಎಂದು ಸ್ವತಃ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ . ಇವರಲ್ಲದೆ ಮಾಜಿ ಸಚಿವರಾದ ಎಸ್.ಸುರೇಶ್ ಕುಮಾರ್ , ಆರ್.ಅಶೋಕ್ , ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ವರಿಷ್ಠರ ಸೂಚನೆ ನೀಡಲಾಗಿದೆ. ಎಸ್.ಎ.ರಾಮದಾಸ್ , ಬಿ.ಸಿ.ನಾಗೇಶ್ಗೂ ವರಿಷ್ಠರು ಸೂಚಿಸಿದ್ದಾರೆ ಎಂದು ಬಿಜೆಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಸೋಮಣ್ಣ ಮತ್ತು ಆನಂದ ಸಿಂಗ್ ಅವರ ಪುತ್ರರಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಹಾಲಿ ಸಚಿವರಿಗೆ ಟಿಕೆಟ್ ಸಿಗುವುದು ಕಠಿಣ.