ಬೆಳಗಾವಿ: ಬೆಳಗಾವಿ ತಾಲೂಕಿನ ಮುತ್ಯಾನಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ಅಪಘಾತಕ್ಕೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಳಗಾವಿ ತಾಲೂಕು ಗೌಂಡವಾಡ ಗ್ರಾಮದ ಛತ್ರಪತಿ ಶಿವಾಜಿಗಲ್ಲಿಯ ಸಕ್ಷಮ್ ಪಾಟೀಲ( 20)ಮತ್ತು ಸಿದ್ಧಾರ್ಥ ಬಾಳು ಪಾಟೀಲ (23) ಅವರು ದ್ವಿಚಕ್ರ ವಾಹನದಲ್ಲಿ ಕಾಕತಿ ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಹೊರಟಿದ್ದರು. ಆ ಸಂದರ್ಭದಲ್ಲಿ ಹಿಂದಿನಿಂದ ಬಂದ ಯಾವುದೋ ಅಪರಿಚಿತ ವಾಹನ ಅಪ್ಪಳಿಸಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಕತಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.