ಬೆಳಗಾವಿ : ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಸನಿಹದ ಬೆಳಕೂಡ ಗೇಟ್ ಬಳಿ ನಿಪ್ಪಾಣಿ- ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಕಾರು-ಗೂಡ್ಸ್ ವಾಹನದ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮುಧೋಳದ ರಾಕೇಶ ವಾಟಕರ್ (23), ಸೌರಭ ಕುಲಕರ್ಣಿ (22) ಮೃತಪಟ್ಟವರು. ಎರಡು ವಾಹನಗಳಲ್ಲಿದ್ದ ನಾಲ್ವರಿಗೆ ಗಾಯಗಳಾಗಿವೆ.
ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕೋಡಿ ಡಿವೈಎಸ್ಪಿ ಗೋಪಾಲ ಕೃಷ್ಣ ಗೌಡರ, ಸಿಪಿಐ ವಿಶ್ವನಾಥ ಚೌಗಲಾ, ಪಿಎಸ್ಐ ರೂಪಾಲಿ ಸ್ಥಳಕ್ಕೆ ಭೇಟಿ ನೀಡಿದರು. ಚಿಕ್ಕೋಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.