ಬೆಳಗಾವಿ: ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಟೋಟಗೊಂಡ ಪರಿಣಾಮವಾಗಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. 6 ಕಾರ್ಮಿಕರಿಗೆ ಗಂಭೀರ ಗಾಯವಾದ ಘಟನೆ ಬೈಲಹೊಂಗಲ ತಾಲೂಕಿನ ಮರಕುಂಬಿಯಲ್ಲಿ ಬುಧವಾರ ನಡೆದಿದೆ.
ಮರಕಂಬಿ ಗ್ರಾಮದ ಹೊರ ವಲಯದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ದುರ್ಘಟನೆಯಲ್ಲಿ ಗಂಭೀರ ಗಾಯಗೊಂಡವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಪೊಲೀಸರು ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಳಗಾವಿ ಎಸ್.ಪಿ. ಕೆ.ರಾಮರಾಜನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ದುರಂತ ಪ್ರಕರಣಕ್ಕೆ ಸಂಬಂಧಿಸಿ ಬೆಳಗಾವಿಯಲ್ಲಿ ಎಸ್.ಪಿ. ಕೆ. ರಾಮರಾಜನ್ ಮಾತನಾಡಿ, ಮಧ್ಯಾಹ್ನ 2 ಗಂಟೆಗೆ ಮರಕುಂಬಿಯ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, 8 ಜನರಿಗೆ ಬಿಸಿ ಪದಾರ್ಥ(ಮಳ್ಳಿ) ಮೈ ಮೇಲೆ ಬಿದ್ದು ಗಾಯವಾಗಿದೆ. ಒಬ್ಬರನ್ನು ಬೈಲಹೊಂಗಲ ಆಸ್ಪತ್ರೆ ಹಾಗೂ ಇನ್ನುಳಿದವರು ಬೆಳಗಾವಿ ಆಸ್ಪತ್ರೆಗೆ ಸೇರಿಸಲಾಗಿದೆ. ಝಿರೋ ಟ್ರಾಫಿಕ್ ನಲ್ಲಿ ಗಾಯಾಳುಗಳು ಶಿಫ್ಟ್ ಮಾಡಲಾಗಿದೆ. ದೂರು ಆಧರಿಸಿ ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


