ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಇಬ್ಬರು ಗಾಯಗೊಂಡ ಘಟನೆ ಬೆಳಗಾವಿ ತಾಲೂಕು ಮುಚ್ಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಮುಚ್ಚಂಡಿ ಗ್ರಾಮದ ಸಂತೋಷ್ ವಟಾರ್ (34) ಮತ್ತು 10 ವರ್ಷದ ಇನ್ನೊಬ್ಬ ಬಾಲಕ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಂತೋಷ್ ಅವರ ಮುಖ, ತೊಡೆ, ಕಣ್ಣು ಮತ್ತು 10 ವರ್ಷದ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ. ಇಬ್ಬರನ್ನೂ ಬೆಳಗಾವಿ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾರಿಹಾಳ ಪೊಲೀಸರು ತಿಳಿಸಿದ್ದಾರೆ.
ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಪಟಾಕಿ ಸಿಡಿದು ಇಬ್ಬರಿಗೆ ಗಾಯ
