ಬೆಳಗಾವಿ: ಸವದತ್ತಿಯ ಹೋಟೆಲ್ ರೂಮ್ ನಲ್ಲಿ ಕುಕ್ಕರ್ ಬ್ಲಾಸ್ಟ್ ಆಗಿ ಮಹಿಳೆಯರಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಕುಟುಂಬ ಸಹಿತರಾಗಿ ಸವದತ್ತಿ ಯಲ್ಲಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಬೆಂಗಳೂರಿನಿಂದ ಐವರು ಮತ್ತು ಯಾದಗಿರಿಯಿಂದ ಮೂವರು ಭಕ್ತರು ಬಂದಿದ್ದರು. ಹೋಳಿಗೆ ಮಾಡಲು ಕುಕ್ಕರ್ ನಲ್ಲಿ ಬೇಳೆ ಬೇಯಿಸಲು ಗ್ಯಾಸ್ ಹೊತ್ತಿಸಿದ್ದರು. ಕುಕ್ಕರ್ ಎರಡು ಸಿಟಿ ಹೊಡೆದ ಬಳಿಕ ಸ್ಫೋಟಗೊಂಡಿದೆ. 6 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ಸವದತ್ತಿಯಲ್ಲಿ ಕುಕ್ಕರ್ ಸ್ಫೋಟಗೊಂಡು ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
