ದೆಹಲಿ :
ಬ್ರಿಟಿಷ್ ಕಾಲದ ಕಾನೂನುಗಳನ್ನು ಭಾರತೀಯ ಹೆಸರಿಗೆ ರೂಪಾಂತರ ಮಾಡಿರುವ ಕೇಂದ್ರ ಸರಕಾರ ಅವುಗಳನ್ನು ಶೀಘ್ರವೇ ಸಂಸತ್ತಿನಲ್ಲಿ ಅಂಗೀಕರಿಸುವುದಾಗಿ ತಿಳಿಸಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆ ಬದಲಿಗೆ ನೂತನ ಮಸೂದೆಗಳನ್ನು ಶೀಘ್ರದಲ್ಲೇ ಸಂಸತ್ತಿನಲ್ಲಿ ಅಂಗೀಕರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.
ಹೈದರಾಬಾದಿನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ ಐಪಿಎಸ್ ಕೆಡೆಟ್ಗಳ ನಿರ್ಗಮನ ಪಥಸಂಚಲನದಲ್ಲಿ ಮಾತನಾಡಿದ ಅಮಿತ್ ಶಾ, ‘ಬ್ರಿಟಿಷರ ಕಾಲದಲ್ಲಿ ಜಾರಿಗೆ ತಂದಿದ್ದ ಅಪರಾಧ ಕಾನೂನುಗಳನ್ನು ಭಾರತ ತ್ಯಜಿಸುತ್ತದೆ. ಹೊಸ ಭರವಸೆ ಮತ್ತು ಆತ್ಮವಿಶ್ವಾಸದೊಂದಿಗೆ ನೂತನ ಯುಗವನ್ನು ಪ್ರವೇಶಿಸುತ್ತದೆ’ ಎಂದು ಹೇಳಿದ್ದಾರೆ.