ಬೆಳಗಾವಿ :
ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಮತ್ತೆ ಜೀವ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಗುರುವಾರ ತಡರಾತ್ರಿ ಮಹಾರಾಷ್ಟ್ರದ ಮೀರಜ್ ಪೊಲೀಸರು ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ತೆರಳಿ ತಪಾಸಣೆ ನಡೆಸಿದ್ದಾರೆ.
ಕೇಂದ್ರ ಸಚಿವ ಗಡ್ಕರಿ ಅವರಿಗೆ ಕರೆ ಮಾಡಿದ್ದ ವ್ಯಕ್ತಿಯ ಮೊಬೈಲ್ ಕರೆ ಹಿಂಡಲಗಾ ಜೈಲು ತೋರಿಸಿದ್ದ ಹಿನ್ನೆಲೆಯಲ್ಲಿ ಪೊಲೀಸರು ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಜೈಲಿಗೆ ಆಗಮಿಸಿ, ಕರೆ ಮಾಡಿದ್ದ ವ್ಯಕ್ತಿಯ ಮೊಬೈಲ್ ಗೆ ಹುಡುಕಾಟ ನಡೆಸಿದ್ದಾರೆ. ಈ ಮೊಬೈಲ್ ನಿಂದ ಗೂಗಲ್ ಪೇ ಗೆ ಹತ್ತು ಕೋಟಿ ಕಳಿಸಿ ಪೊಲೀಸರಿಗೆ ತಿಳಿಸಿ ಬೇಡಿ ಎಂದು ಬೆಳಗಾವಿ ಜೈಲಿನಲ್ಲಿರುವ ಆರೋಪಿ ಮಂಗಳವಾರ ಬೆಳಗ್ಗೆ ಕೇಂದ್ರ ಸಚಿವರಿಗೆ ಕರೆ ಮಾಡಿದ್ದ. ಈ ಹಿನ್ನೆಲೆಯಲ್ಲಿ ಮೀರಜ್ ಪೊಲೀಸರು ಜೈಲಿಗೆ ಆಗಮಿಸಿ ತಪಾಸಣೆ ನಡೆಸಿದ್ದಾರೆ.