ಕಾರವಾರ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿರುವುದರಿಂದ, ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸೋಮವಾರ (ಜುಲೈ 22) ಜಿಲ್ಲೆಯ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ ದಾಂಡೇಲಿ, ಹಳಿಯಾಳ, ಮುಂಡಗೋಡ ಹಾಗೂ ಜೋಯಿಡಾ ತಾಲೂಕಿನ ಎಲ್ಲ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಸೋಮವಾರ (ಜುಲೈ 22) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ.