ಬೆಳಗಾವಿ : ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ “ವಂದೇ ಭಾರತ ಎಕ್ಸಪ್ರೆಸ್ ರೈಲು” ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತಾದ ನಮ್ಮ ಬೇಡಿಕೆಯ ಬದಲು, ಬೆಳಗಾವಿಯಿಂದ ಬೆಂಗಳೂರು ವರೆಗೆ ಹೊಸದೊಂದು ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಚಲಿಸಲಾಗುವ ಕುರಿತು ಅಗತ್ಯ ಅನುಮೋದನೆ / ಆದೇಶ ನೀಡಿರುವ ಬಗ್ಗೆ ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಅವರು ತಿಳಿಸಿರುವುದಾಗಿ ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಮಾಜಿ ಮುಖ್ಯ ಮಂತ್ರಿ ಜಗದೀಶ ಶೆಟ್ಟರ್ ತಿಳಿಸಿದ್ದಾರೆ.
ಬೆಂಗಳೂರು- ಧಾರವಾಡ ನಡುವೆ ಸದ್ಯ ಸಂಚರಿಸುತ್ತಿರುವ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿ ನಗರದ ವರೆಗೆ ವಿಸ್ತರಿಸುವ ಕುರಿತು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಇವರೊಂದಿಗೆ ಹಲವು ಬಾರಿ ಸಭೆಯನ್ನು / ಚರ್ಚೆಯನ್ನು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಅವರ ಉಪಸ್ಥಿತಿಯಲ್ಲಿ ನಡೆದಿದ್ದು ಮತ್ತು ಒತ್ತಾಯಿಸಿದ್ದು ಇಲ್ಲಿ ಸ್ಮರಣೀಯ.
ಆದರೆ ಪ್ರಸ್ತಾಪಿತ ವಿಷಯವಾಗಿ ಬೆಳಗಾವಿ-ಬೆಂಗಳೂರು ನಡುವೆ ಬೆಳಗಾವಿ ನಗರದಿಂದ ಹೊಸ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ಬೆಳಿಗ್ಗೆ ಪ್ರಾರಂಭಿಸಿ ಬೆಂಗಳೂರು ತಲುಪಿ ತದನಂತರ ಮದ್ಯಾಹ್ನ ಬೆಂಗಳೂರಿನಿಂದ ಹೊರಟು ರಾತ್ರಿ ಬೆಳಗಾವಿ ತಲುಪುವ ಬಗ್ಗೆ ವಿಷಯ ತಿಳಿದು ಬಂದಿದೆ.
ನೂತನ ವಂದೇ ಭಾರತ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಬೆಳಗಾವಿಯಿಂದ ಪ್ರಾರಂಭಿಸುವ ವಿಷಯವಾಗಿ ಅಗತ್ಯ ಅನುಮೋದನೆ ನೀಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಇವರಿಗೆ ಹಾಗೂ ಕೇಂದ್ರ ರೇಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಅವರು ಹೇಳಿದ್ದಾರೆ.
ಅದರಂತೆ ಅದಷ್ಟು ಬೇಗನೆ ಈ ಸೇವೆಯನ್ನು ಪ್ರಾರಂಭಿಸುವ ಬಗ್ಗೆ ದಿನಾಂಕ ನಿಗದಿಪಡಿಸಿ ಬೆಳಗಾವಿ ಜಿಲ್ಲಾ ರಹವಾಸಿಗಳಿಗೆ ಅನುಕೂಲತೆ ಕಲ್ಪಿಕೊಡುವಂತೆ ಕೇಂದ್ರ ರೇಲ್ವೆ ಸಚಿವರಲ್ಲಿ ವಿನಂತಿಸಿದ್ದಾರೆ.