ಬೆಂಗಳೂರು :
ರಾಜ್ಯದ ಎರಡನೇ ರಾಜಧಾನಿ ಎಂದೇ ಪರಿಗಣಿತವಾಗಿರುವ ಬೆಳಗಾವಿ ಮಹಾನಗರಕ್ಕೆ ವಂದೇ ಭಾರತ ರೈಲು ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ನಗರದ ಜನತೆ ಕೇಂದ್ರ ಸರಕಾರದ ಮೇಲೆ ಸದಾ ಒತ್ತಡ ಹೇರುತ್ತಲೇ ಬಂದಿದ್ದಾರೆ. ಇದೀಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸ್ವತಃ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಅವರಿಗೆ ಪತ್ರ ಬರೆದು ಬೆಳಗಾವಿಗೆ ವಂದೇ ಭಾರತ ರೈಲು ವ್ಯವಸ್ಥೆ ನೀಡುವಂತೆ ಸ್ವತಃ ಒತ್ತಡ ಹೇರಿದ್ದಾರೆ.
ಕೇಂದ್ರ ಸಚಿವರಿಗೆ ಬರೆದ ಪತ್ರದ ಸಾರಾಂಶ :
ಬೆಳಗಾವಿಯ ಕಿತ್ತೂರು ಕರ್ನಾಟಕ ಪ್ರದೇಶದಲ್ಲಿ ನೆಲೆಸಿರುವ ಲಕ್ಷಾಂತರ ಕನ್ನಡಿಗರ ಪರವಾಗಿ ನಾನು ನಿಮಗೆ ಪತ್ರ ಬರೆಯುತ್ತೇನೆ. ಕೇಂದ್ರ ಸರ್ಕಾರವು ತನ್ನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಸೇವೆಯನ್ನು ಬೆಂಗಳೂರು ಮತ್ತು ಹುಬ್ಬಳ್ಳಿ-ಧಾರವಾಡ ನಡುವೆ ಜೂನ್ 27, 2023 ರಂದು ಕರ್ನಾಟಕದಲ್ಲಿ ಎರಡನೇ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಪ್ರಾರಂಭಿಸಿದೆ. ಇದು ಧಾರವಾಡ, ಹುಬ್ಬಳ್ಳಿ ಮತ್ತು ದಾವಣಗೆರೆ ನಡುವಿನ ಪ್ರದೇಶದ ಸಂಪರ್ಕದಲ್ಲಿ ಒಂದು ಮಾದರಿ ಬದಲಾವಣೆಯನ್ನು ತಂದಿದೆ. ಈ ನಿಟ್ಟಿನಲ್ಲಿ ಬೆಂಗಳೂರು-
ಬೆಳಗಾವಿಯ ಕೈಗಾರಿಕೋದ್ಯಮಿಗಳು, ವಿದ್ಯಾರ್ಥಿಗಳು ಮತ್ತು ಪ್ರವಾಸಿಗರಿಗೆ ಗಮನಾರ್ಹ ಅನುಕೂಲವಾಗುವಂತೆ
ವಂದೇ ಭಾರತ ರೈಲು ವ್ಯವಸ್ಥೆಯಾಗಬೇಕು.
ಬೆಳಗಾವಿಯು ಸಕ್ಕರೆ, ಅಲ್ಯುಮಿನಿಯಂ ಮತ್ತು ಪ್ರಮುಖ ಕೈಗಾರಿಕೆಗಳನ್ನು ಹೊಂದಿರುವ ಆರ್ಥಿಕವಾಗಿ ಶಕ್ತಿಯುತ ಜಿಲ್ಲೆಯಾಗಿದೆ. ಹಲವಾರು ಸಣ್ಣ ಕೈಗಾರಿಕೆಗಳನ್ನು ಹೊರತುಪಡಿಸಿ ಆಟೋಮೊಬೈಲ್ ಮತ್ತು ಏರೋಸ್ಪೇಸ್ ಉದ್ಯಮಗಳಿಗೆ ಆಧಾರವಾಗಿದೆ. ಮಧ್ಯಮ ಕೈಗಾರಿಕೆಗಳು ಸಾಕಷ್ಟು ಪ್ರಮಾಣದಲ್ಲಿವೆ. ಬೆಳಗಾವಿ ಶ್ರೀಮಂತ ಸಾಂಸ್ಕೃತಿಕ ಮತ್ತು ಪ್ರವಾಸಿ ತಾಣವಾಗಿದೆ. ಬೆಂಗಳೂರು- ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ರೈಲು ಸೇವೆಯನ್ನು ಬೆಳಗಾವಿ ನಗರಕ್ಕೆ ವಿಸ್ತರಿಸಲು ನಾನು ನಿಮ್ಮನ್ನು ಕೇಳುತ್ತೇನೆ. ಇದು ರಾಜ್ಯಗಳ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಹೆಚ್ಚಿಸುತ್ತದೆ.
ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಕೇಂದ್ರಬಿಂದು ಆಗಿರುವ ಬೆಳಗಾವಿಯ ಅಭಿವೃದ್ಧಿಯಲ್ಲಿ ವಂದೇ ಭಾರತ ರೈಲ್ವೆ ಸಂಚಾರವನ್ನು ಬೆಳಗಾವಿ ವರೆಗೂ ವಿಸ್ತರಿಸುವಂತೆ ಅವರು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.
ವಿಧಾನಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರೂ ಈ ಬಗ್ಗೆ ನಿಮಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಗಮನಹರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಒತ್ತಾಯಿಸುತ್ತೇನೆ. ಈ ಕ್ರಮದಿಂದ ಈ ಭಾಗದ ಸಮಗ್ರ ಅಭಿವೃದ್ಧಿ ಗಮನಹರಿಸಿ ರೈಲ್ವೆ ಸಂಚಾರ ವ್ಯವಸ್ಥೆ ನೀಡುವಂತೆ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ.