ಬೆಳಗಾವಿ: ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ 12 ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10 ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ.
ಶಿಕ್ಷೆಗೆ ಗುರಿಯಾದ ಆರೋಪಿಗಳನ್ನು ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿ ಎಂದು ಗುರುತಿಸಲಾಗಿದೆ.
ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಆರೋಪಿಗಳನ್ನು ದೋಷಿಗಳೆಂದು ತೀರ್ಮಾನಿಸಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.


