ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ಘಟನೆ ಬಳಿಕ ವಿಜಯಲಕ್ಷ್ಮಿ ಅವರು ಎಲ್ಲಿಯೂ ಕಾಣಿಸಿಕೊಂಡಿಲ್ಲ.
ಈಗ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಮ್ ಪ್ರೊಫೈಲ್ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್ಫಾಲೋ ಮಾಡಿದ್ದಾರೆ.
ಪವಿತ್ರಾ ಗೌಡ ವಿಚಾರದಲ್ಲಿ ವಿಜಯಲಕ್ಷ್ಮಿ ಈ ಹಿಂದೆ ಸಾಕಷ್ಟು ಬಾರಿ ಸೋಷಿಯಲ್ ಮೀಡಿಯಾ ವಾರ್ ನಡೆಸಿದ್ದರು. ಪವಿತ್ರಾ ವಿರುದ್ಧ ಹೇಳಿಕೆಗಳನ್ನು ನೀಡಿದ್ದರು. ದರ್ಶನ್ ಕೊಲೆ ಆರೋಪದಲ್ಲಿ ಸಿಕ್ಕಿ ಹಾಕಿಕೊಂಡಿರುವುದು ಪವಿತ್ರಾ ಅವರ ವಿಚಾರದಲ್ಲಿ. ಹೀಗಾಗಿ ಅವರಿಗೆ ಸಹಜವಾಗಿಯೇ ಅಸಮಾಧಾನ ಉಂಟಾಗಿರುತ್ತದೆ. ಕೆಲ ತಿಂಗಳ ಹಿಂದೆ ಪವಿತ್ರಾ ಗೌಡ ಅವರು ದರ್ಶನ್ ಜತೆ ಇರುವ ಫೋಟೋ ಹಂಚಿಕೊಂಡಿದ್ದರು. 10 ವರ್ಷಗಳ ಸಂಬಂಧ ಎಂದು ಟ್ಯಾಗ್ಲೈನ್ ನೀಡಿದ್ದರು. ಇದನ್ನು ವಿಜಯಲಕ್ಷ್ಮಿ ಖಂಡಿಸಿದ್ದರು. ಇದೀಗ ಇನ್ಸ್ಟಾಗ್ರಾಮ್ನಲ್ಲಿ ದರ್ಶನ್ ಸೇರಿ ಎಲ್ಲರನ್ನೂ ವಿಜಯಲಕ್ಷ್ಮಿ ಅನ್ಫಾಲೋ ಮಾಡಿದ್ದಾರೆ. ಈ ಮೊದಲು ಅವರು ದರ್ಶನ್ನ ಫಾಲೋ ಮಾಡುತ್ತಿದ್ದರು. ಇನ್ಸ್ಟಾಗ್ರಾಮ್ ಡಿಪಿಯನ್ನು ತೆಗೆದು ಹಾಕಿದ್ದಾರೆ.