ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕೆ ಎಲ್ ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆಯವರನ್ನು ಸತ್ಕರಿಸಿದರು.
ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಸೇವಾ ಪ್ರಶಸ್ತಿ ಪದ್ಮಶ್ರೀಗೆ ಪುರಸ್ಕೃತ ಕೋರೆಯವರ ಸೇವೆ ಅಪಾರವಾದದು. ಶಿಕ್ಷಣ ಆರೋಗ್ಯ ಕ್ಷೇತ್ರದಲ್ಲಿ ನಾಡಿಗೆ ಅದ್ವಿತೀಯ ಕೊಡುಗೆಯನ್ನು ಸಲ್ಲಿಸಿದ್ದಾರೆ. ಸಮಾಜಮುಖಿಯಾಗಿ ಅವರು ನೀಡಿರುವ ಸೇವೆ ಬೆಲೆ ಕಟ್ಟಲಾರದು. ಅವರಿಗೆ ಪದ್ಮಶ್ರೀ ಗೌರವ ಸಂದಿರುವುದು ವೈಯಕ್ತಿಕವಾಗಿ ಹೆಮ್ಮೆಯನ್ನು ತಂದಿದೆ ಎಂದು ವಿಜಯೇಂದ್ರ ಹೇಳಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕಮಟಗಿಮಠ, ಮಾಜಿ ಶಾಸಕರಾದ ವಿಶ್ವನಾಥ ಪಾಟೀಲ, ಅನಿಲ ಬೆನಕೆ ಉಪಸ್ಥಿತರಿದ್ದರು.


