ಬೆಳಗಾವಿ :ಮಾಜಿ ಸಚಿವ ವಿನಯ ಕುಲಕರ್ಣಿ ಹುಟ್ಟುಹಬ್ಬ ನಿಮಿತ್ತ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.
ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅವರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು ಲಕ್ಷಾಂತರ ಜನರನ್ನು ಸೇರಿಸಲು ನಿರ್ಧರಿಸಿದ್ದಾರೆ.
ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶ ಗೌಡ ಕೊಲೆ ಪ್ರಕರಣದಲ್ಲಿ ವಿನಯ ಕುಲಕರ್ಣಿ ಅವರಿಗೆ ಧಾರವಾಡ ಜಿಲ್ಲೆ ಪ್ರವೇಶಿಸಲು ನ್ಯಾಯಾಲಯ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಪ್ರವೇಶಿಸುವ ಗಡಿ ಭಾಗವಾದ ಕಿತ್ತೂರಿನಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ದಿಗ್ಗಜ ನಾಯಕರು ಆಗಮಿಸಲಿದ್ದಾರೆ.