ಬೆಳಗಾವಿ : ಖಾನಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ಕ್ರೀಡೆ-ಸಾಂಸ್ಕೃತಿಕ ಚಟುವಟಿಕೆಗಳು, ಇಕೋ ಕ್ಲಬ್ ಮತ್ತು ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭವನ್ನು ಇತ್ತೀಚೆಗೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತ್ತು.
ಶಾಸಕ ವಿಠ್ಠಲ್ ಸೋಮಣ್ಣ ಹಲಗೆಕರ್ ಅವರು ಭಾಗವಹಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಹೇಗೆ ಸಹಕಾರಿ ಎಂಬುದನ್ನು ವಿವರಿಸಿದರು.
ಇಂತಹ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ತಂಡದ ಮನೋಭಾವ ಮತ್ತು ಸೃಜನಶೀಲತೆಯನ್ನು ಬೆಳೆಸಲು ಸಹಾಯ ಮಾಡುತ್ತವೆ ಎಂದು ಹೇಳಿದರು.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿ ಪಿ .ರಾಮಪ್ಪ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಂ.ಎಂ. ಕಾಂಬಳೆ ,ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ರಾಜಕುಮಾರ ಟಾಕಟ್, ಪ್ರಸನ್ನ ಕುಲಕರ್ಣಿ, ಎಸ್.ಕೆ. ಅಕಿನಾಟ ಉಪಸ್ಥಿತರಿದ್ದರು. ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ಎಲ್ಲಾ ವಿದ್ಯಾರ್ಥಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.