ಬೆಳಗಾವಿ :
ವಿಧಾನಸಭೆಯ ಸೆಮಿಫೈನಲ್ನಲ್ಲಿ ಗೆದ್ದಿದ್ದೇವೆ, ಈಗ ಲೋಕಸಭೆಯ ಫೈನಲ್ನಲ್ಲಿ ಗೆಲ್ಲಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಗ್ರಾಮೀಣ ಬೆಳಗಾವಿ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಕರೆ ನೀಡಿದರು
ಇಂದು ಗುರುವಾರ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾ ಎಸ್ಸಿ ವಿಭಾಗ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸಭೆಗೆ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ವಿಧಾನಸೌಧದ ಸೆಮಿಫೈನಲ್ ನಲ್ಲಿ ಸಂಘಟನೆ ಬಲದಿಂದ ಗೆದ್ದಿದ್ದೇವೆ.ಈಗ ಅದೇ ರೀತಿ ಸಂಘಟಿತರಾಗಿ ಪಕ್ಷವನ್ನು ಬಲಪಡಿಸುವ ಮೂಲಕ ಲೋಕಸಭೆಯ ಅಂತಿಮ ಫೈನಲ್ಗೆ ಸಿದ್ಧರಾಗಿ ಎಂದರು . ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಕಾಂಗ್ರೆಸ್ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಬೆಂಬಲ ನೀಡಲು ಸದಾ ಸಿದ್ಧ.ಅವರ ಮಾರ್ಗದರ್ಶನ ಹಾಗೂ ನಾಯಕತ್ವದಲ್ಲಿ ಬೆಳಗಾವಿ ಜಿಲ್ಲೆಯ ಬೆಳಗಾವಿ, ಚಿಕ್ಕೋಡಿ ಹಾಗೂ ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಿ ಲೋಕಸಭೆಯನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.ಕಾಂಗ್ರೆಸ್ ಪರಿಶಿಷ್ಟ ಜಾತಿ ಜಿಲ್ಲಾ ವಿಭಾಗ ಅಧ್ಯಕ್ಷ ಅನಂತಕುಮಾರ ಬ್ಯಾಕೂಡ್ ಮಾತನಾಡಿ, ಹಿರಿಯ ಮುಖಂಡರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಚಿವ ಸತೀಶ ಜಾರಕಿಹೊಳಿ ಹಾಗೂ ಪಕ್ಷವು ಪರಿಶಿಷ್ಠ ಜಾತಿ ಜಿಲ್ಲಾ ವಿಭಾಗ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಟ್ಟಿರುವ ಕೆಲಸವನ್ನು ಪ್ರಾಮಾಣಿಕವಾಗಿ ನಿಭಾಯಿಸುತ್ತೇನೆ. ನಿಮ್ಮೆಲ್ಲರ ಸಹಕಾರ ಇರಲಿ ಎಂದರು.
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸೋಣ ಮತ್ತು ನಮ್ಮ ನಾಯಕ ರಾಹುಲ್ ಗಾಂಧಿಯವರ ಕನಸಿನ ದೇಶವನ್ನು ಕಟ್ಟಲು ಪ್ರಯತ್ನಿಸೋಣ. ವಂಚಿತ ಮತ್ತು ತುಳಿತಕ್ಕೊಳಗಾದ ವರ್ಗವನ್ನು ಕಾಂಗ್ರೆಸ್ ಉಳಿಸಿದೆ. ಹಾಗಾಗಿ ಪಕ್ಷವನ್ನು ಬಲಪಡಿಸಲು ನಾವೆಲ್ಲರೂ ಕಾಂಗ್ರೆಸ್ ಕಾರ್ಯಕರ್ತರು ಶ್ರಮಿಸಬೇಕಿದೆ ಎಂದರು .ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಲಕ್ಷ್ಮೀ ನಾಗಣ್ಣವರ, ರಮೇಶ ರಜಪೂತ, ಹನ್ಮಂತ ಬಜಂತ್ರಿ, ಪರಶುರಾಮ ಕಾಂಬಳೆ, ರುದ್ರಪ್ಪ ಮುಂದಿನಮನಿ, ಮಹೇಶ ಕಾಂಬಳೆ, ಲಕ್ಷ್ಮಣ ಮಾದರ ಸೇರಿದಂತೆ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.