This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ರೆಡ್ಡಿ ಪಕ್ಷ ಸೇರ್ಪಡೆ ಕುರಿತು ಡಿಕೆಶಿ ಹೇಳಿದ್ದೇನು ? What did DKshi say about Reddy joining the party?


 

ಬೆಳಗಾವಿ :
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಕಾಂಗ್ರೆಸ್ ಸೇರ್ಪಡೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ ಏನು ಗೊತ್ತೆ ?

ವಿನಯ್ ಕುಲಕರ್ಣಿ ಅವರ ಜನ್ಮದಿನ ಕಾರ್ಯಕ್ರಮ ನಿಮಿತ್ತ ಇಲ್ಲಿಗೆ ಆಗಮಿಸಿದ್ದೇನೆ. ಒಬ್ಬೊಬ್ಬರೂ ಒಂದೊಂದು ಶೈಲಿಯಲ್ಲಿ ಜನ್ಮದಿನ ಆಚರಿಸಿಕೊಳ್ಳುತ್ತಾರೆ. ನಾನು ಕೇದಾರನಾಥ ದೇವಾಲಯಕ್ಕೆ ಕುಟುಂಬ ಸಮೇತ ಹೋಗಿ ಪೂಜೆ ಸಲ್ಲಿಸಿದ್ದೆ. ಸಿದ್ದರಾಮಯ್ಯ ಅವರ ಜನ್ಮದಿನವನ್ನು ಅವರ ಅಭಿಮಾನಿಗಳು ದೊಡ್ಡ ಕಾರ್ಯಕ್ರಮ ಮಾಡಿ ಆಚರಿಸಿದ್ದರು.

ವಿನಯ್ ಅವರಿಗೆ ಪಕ್ಷದಲ್ಲಿ ಉನ್ನತ ಜವಾಬ್ದಾರಿ ನೀಡಲಾಗುವುದೇ ಎಂಬ ಪ್ರಶ್ನೆಗೆ, ‘ ಅವರಿಗೆ ಈಗಾಗಲೇ ಪಕ್ಷದ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಜಿಲ್ಲೆಯ ಜವಾಬ್ದಾರಿ ವಹಿಸಲಾಗಿದೆ’ ಎಂದರು.

ಈ ಕಾರ್ಯಕ್ರಮದ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, ‘ ಬಿಜೆಪಿಯವರು ನನ್ನನ್ನು, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರನ್ನು ಕ್ರಿಮಿನಲ್ ಆಗಿ ಬಿಂಬಿಸಿದ್ದಾರೆ. ರಾಜಕೀಯವಾಗಿ ಬಲಿಷ್ಠವಾಗಿ ಬೆಳೆಯುವವರ ವಿರುದ್ಧ ಈ ರೀತಿ ಆರೋಪ ಮಾಡುತ್ತಾರೆ. ಹೆಚ್ಚು ಬಲಶಾಲಿ ಆದಷ್ಟು ಹೆಚ್ಚು ಶತ್ರುಗಳು, ಬಲಶಾಲಿ ಅಲ್ಲದಿದ್ದರೆ ಶತ್ರುಗಳೇ ಇಲ್ಲ. ಬಿಜೆಪಿಯವರು ತಮಗೆ ಯಾರೆಲ್ಲಾ ರಾಜಕೀಯವಾಗಿ ಅಪಾಯ ಎಂದು ತಿಳಿಯುತ್ತಾರೋ ಅವರಿಗೆ ಈ ರೀತಿ ಕಿರುಕುಳ ನೀಡುತ್ತಾರೆ. ಪೊಲೀಸ್ ತನಿಖೆಯಲ್ಲಿ ವಿನಯ್ ಕುಲಕರ್ಣಿ ಅವರ ಮೇಲೆ ಯಾವುದೇ ಆರೋಪ ಇಲ್ಲ ಎಂದು ಪ್ರಕರಣ ಮುಕ್ತಾಯ ಹಂತದಲ್ಲಿ ಇದ್ದಾಗ, ಇವರು ರಾಜಕೀಯ ಉದ್ದೇಶದಿಂದ ಪ್ರಭಾವ ಬೀರಿ ಪ್ರಕರಣವನ್ನು ಸಿಬಿಐಗೆ ನೀಡಿ ಅವರನ್ನು ಸಿಲುಕಿಸುವ ಪ್ರಯತ್ನ ಮಾಡಿದ್ದಾರೆ ‘ ಎಂದು ತಿಳಿಸಿದರು.

ಇಂಧನ ಇಲಾಖೆ ಯೋಜನೆಗಳ ತನಿಖೆ ಬಗ್ಗೆ ಸಿಎಂ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಮುಖ್ಯಮಂತ್ರಿಗಳು ನಾನು ಇಂಧನ ಸಚಿವನಾಗಿದ್ದ ಕಾಲದ ಯೋಜನೆಗಳನ್ನು ತನಿಖೆ ಮಾಡಿಸಬೇಕು ಎಂದು ಹೇಳಿದ್ದಾರೆ. ಅವರು ತನಿಖೆ ಮಾಡಿಸಲಿ. ನಾನು ಸ್ವಾಗತಿಸುತ್ತೇನೆ. ನಾನು ಕೂಡ ಕಣ್ಣು ಮುಚ್ಚಿಕೊಂಡು ಕುಳಿತಿಲ್ಲ.

ಇಂಧನ ಇಲಾಖೆ, ನೀರಾವರಿ ಇಲಾಖೆ ಎಲ್ಲವನ್ನೂ ಮಾಡಲಿ. ಬಿಜೆಪಿ ಆಡಳಿತದಲ್ಲಿ ಏನೆಲ್ಲಾ ಆಗಿದೆ, 100 ಕೋಟಿ ಯೋಜನೆಯನ್ನು 300 ಕೋಟಿ ಯೋಜನೆ ಹೇಗೆ ಮಾಡಿದ್ದಾರೆ, 300 ಕೋಟಿ ಯೋಜನೆಯನ್ನು 700 ಕೋಟಿ ಮಾಡಿ ಗುತ್ತಿಗೆಗೆ ಹೇಗೆ ನೀಡಿದ್ದಾರೆ. ಈ ಜಿಲ್ಲೆಯಲ್ಲಿ ಸಾಕಷ್ಟು ಉದಾಹರಣೆಗಳಿವೆ. ನಾನು ಕಣ್ಣು ಮುಚ್ಚಿಕೊಂಡು ರಾಜಕಾರಣ ಮಾಡುತ್ತಿಲ್ಲ. ಜಾಗತಿಕ ಬಂಡವಾಳ ಹೂಡಿಕೆಯಲ್ಲಿ 10 ಲಕ್ಷ ಕೋಟಿ ಬಂಡವಾಳಕ್ಕೆ ಸಹಿ ಎಂದು ಹೇಳಿದ್ದಾರೆ. ಸಮಯ ಬರಲಿ, ಎಲ್ಲದಕ್ಕೂ ನಾನು ಉತ್ತರ ನೀಡುತ್ತೇನೆ.

ಸರ್ಕಾರಿ ಕಾರ್ಯಕ್ರಮಕ್ಕೆ ಶಿಕ್ಷಕರ ಹಾಜರಿ ಕಡ್ಡಾಯದ ಬಗ್ಗೆ ಕೇಳಿದಾಗ, ‘ ಸರ್ಕಾರ ಪ್ರತಿಯೊಬ್ಬರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶಿಕ್ಷಕರು ಯಾಕೆ ಬರಬೇಕು? ಕಾರ್ಯಕರ್ತರು ಹಾಗೂ ಜನರನ್ನು ಕರೆದುಕೊಂಡು ಬಂದು ಕಾರ್ಯಕ್ರಮ ಮಾಡಲಿ. ಶಿಕ್ಷಕರನ್ನು ಇವರ ರಾಜಕಾರಣಕ್ಕೆ ಬಳಸಿಕೊಳ್ಳಲು ಈ ರೀತಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕರ ದಿನದಂದು ಅವರಿಗೆ ಅಭಿನಂದನೆ ಸಲ್ಲಿಸಲಿ ‘ ಎಂದರು.

ಜನಾರ್ದನ ರೆಡ್ಡಿ ಅವರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರಾ ಎಂಬ ಪ್ರಶ್ನೆಗೆ, ‘ ಈ ಬಗ್ಗೆ ಯಾರೂ ನನ್ನನ್ನು ಸಂಪರ್ಕ ಮಾಡಿಲ್ಲ. ಬೇರೆ ಕೆಲವು ನಾಯಕರು ಸಂಪರ್ಕದಲ್ಲಿದ್ದು, ಪಕ್ಷಕ್ಕೆ ಸೇರಲು ಅರ್ಜಿ ಹಾಕಿದ್ದಾರೆ. ಕೆಲವರು ಸದಸ್ಯತ್ವ ತೆಗೆದುಕೊಂಡಿದ್ದು, ಅವರು ಪಕ್ಷ ಸೇರುವಾಗ ಜಿಲ್ಲಾವಾರು ಪಟ್ಟಿ ನೀಡುತ್ತೇವೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತ, ನಾಯಕತ್ವದಲ್ಲಿ ನಂಬಿಕೆ ಇಟ್ಟವರು ಪಕ್ಷ ಸೇರಲು ಅರ್ಜಿ ಹಾಕಬಹುದು ‘ ಎಂದರು.


Jana Jeevala
the authorJana Jeevala

Leave a Reply