ಬೆಂಗಳೂರು :
ಶಕ್ತಿ ಯೋಜನೆ ಕುರಿತು ಎಸ್ ಆರ್ ಟಿಸಿ ಮಹತ್ವದ ಸೂಚನೆಯನ್ನು ಪ್ರಯಾಣಿಕರಿಗೆ ನೀಡಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಯೋಜನೆ ಕೊನೆಗೊಳ್ಳಲಿದೆ,
ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿ ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ
ಮಾಹಿತಿಯನ್ನು ಒದಗಿಸುತ್ತೇವೆ.
ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯು ಮುಂದುವರಿಯಲಿದೆ ಎಂದು
ಸ್ಪಷ್ಟಪಡಿಸಲಾಗಿದೆ.