ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸುತ್ತಿರುವ ಬಜೆಟ್ ನಲ್ಲಿ ಬಹುನಿರೀಕ್ಷಿತ ಚಿಕ್ಕೋಡಿ ಜಿಲ್ಲೆ ಘೋಷಣೆ ಆಗುತ್ತಾ ಎಂಬ ನಿರೀಕ್ಷೆ ಹೆಚ್ಚಿದೆ.
ಚಿಕ್ಕೋಡಿ ಮತ್ತು ಗೋಕಾಕ ಜಿಲ್ಲೆಯನ್ನು ರಚನೆ ಮಾಡಬೇಕು ಎಂಬ ಕೂಗು ದಶಕಗಳ ಇತಿಹಾಸ ಹೊಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಚಿಕ್ಕೋಡಿ ರಚನೆ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಂಡನೆಯಾಗುತ್ತಿರುವ ಬಜೆಟ್ ನಲ್ಲಿ ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಜೊತೆಗೆ ಗೋಕಾಕ ಜಿಲ್ಲೆ ರಚನೆ ಬಗ್ಗೆ ಯಾವ ನಿಲುವು ತಾಳುತ್ತಾರೋ ಕಾದು ನೋಡಬೇಕಾಗಿದೆ.


