ದೆಹಲಿ :
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸಚಿವ ಸಂಪುಟ ಸೇರುತ್ತಾರಾ ಎಂಬ ಚರ್ಚೆ ಇದೀಗ ಜೋರಾಗಿ ನಡೆದಿದೆ. ಶಿವಮೊಗ್ಗ ಸಂಸದರು ಆಗಿರುವ ರಾಘವೇಂದ್ರ ಅವರಿಗೆ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಲಿಂಗಾಯತ ಮತ ಸೆಳೆಯಲು ಬಿಎಸ್ ವೈ ಪುತ್ರನಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಆದ್ಯತೆ ನೀಡಬಹುದು. ಸದ್ಯ ರಾಜ್ಯದಿಂದ ಇವರು ಕೇಂದ್ರ ಸಚಿವರಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲನ್ನು ಅನುಭವಿಸಿರುವ ಹಿನ್ನೆಲೆಯಲ್ಲಿ ಬಿಎಸ್ ವೈ ಪುತ್ರನಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆ ಹೆಚ್ಚು.
ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಸ್ಥಾನಗಳ ಪೈಕಿ 25 ರಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಕೇಂದ್ರ ಸಚಿವ ಸಂಪುಟ ಪುನರ್ ರಚನೆ ವೇಳೆ ಲಿಂಗಾಯತ ಸಮುದಾಯಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.