ಬೆಳಗಾವಿ : ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಮಹಿಳೆಯರಿಬ್ಬರು ಸೀಟಿಗಾಗಿ ಹೊಡೆದಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಮಹಿಳೆಯರು ಸವದತ್ತಿ ರೇಣುಕಾ ಯಲ್ಲಮ್ಮದೇವಿ ದರ್ಶನ ಪಡೆಯಲು ಸವದತ್ತಿಗೆ ಹೋಗುವ ಬಸ್ಸನ್ನು ಏರಿದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಬಸ್ ಸೀಟ್ ಬಗ್ಗೆ ಪರಸ್ಪರರು ತಾವು ಹಿಡಿದಿದ್ದೇವೆ ಎಂದು ಮಹಿಳೆಯರ ಮಧ್ಯೆ ಜಗಳ ಆರಂಭವಾಗಿದೆ. ಆರಂಭದಲ್ಲಿ ಪರಸ್ಪರ ಬೈದಾಡಿಕೊಂಡ ಮಹಿಳೆಯರು ಗಲಾಟೆ ಜೋರಾದ ನಂತರ ಕೈಕೈ ಮಿಲಾಯಿಸಿ ಚಪ್ಪಲಿಯಲ್ಲಿ ಹೊಡೆದಾಡಿದ್ದು, ಉಳಿದ ಪ್ರಯಾಣಿಕರು ಇವರನ್ನು ಸಮಾಧಾನ ಪಡಿಸಲು ಯತ್ನಿಸಿದರೂ ಇವರು ಸುಮ್ಮನಾಗಲಿಲ್ಲ ಎಂದು ಹೇಳಲಾಗಿದೆ.
ಬಸ್ಸಿನಲ್ಲಿ ಸೀಟಿಗಾಗಿ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಮಹಿಳೆಯರು
